You are currently viewing ಸ್ವಯಂ ಉದ್ಯೋಗ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಸ್ವಯಂ ಉದ್ಯೋಗ ಸೌಲಭ್ಯಗಳಿಗೆ ಅರ್ಜಿ ಆಹ್ವಾನ


ಬಳ್ಳಾರಿ,ಜ.13 ಮಹಾನಗರ ಪಾಲಿಕೆ ವತಿಯಿಂದ ದೀನ್‍ದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯಕ್ಕಾಗಿ ಅರ್ಹ ಆಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆÉಯಲ್ಲಿ ತಿಳಿಸಿರುತ್ತಾರೆ.
ಸ್ವಯಂ ಉದ್ಯೋಗ ಕಾರ್ಯಕ್ರಮ (ವೈಯಕ್ತಿಕ) ಘಟಕದಡಿ ವೈಯಕ್ತಿಕ ಸ್ವಯಂ ಉದ್ಯೋಗ ಕೈಗೊಳ್ಳಲು ಗರಿಷ್ಠ ರೂ.2 ಲಕ್ಷದವರೆಗೆ ಸೇವಾ ವಲಯ ಬ್ಯಾಂಕ್‍ಗಳಿಂದ ಸಾಲ ಸೌಲಭ್ಯ ಹಾಗೂ ಸಾಲದ ಮೇಲೆ ಬಡ್ಡಿ ದರ ಶೇ.7 ಕ್ಕಿಂತ ಮೇಲ್ಪಟ್ಟಿದ್ದರೆ ಬಡ್ಡಿ ಸಹಾಯಧನ ನೀಡಲಾಗುವುದು. ಆಭ್ಯರ್ಥಿಗಳು ಸ್ತ್ರೀ ಶಕ್ತಿ ಸ್ವ-ಸಹಾಯ ಸಂಘಗಳ ಸದಸ್ಯರಾಗಿರಬೇಕು ಅಥವಾ ಅವರ ಮನೆಯಲ್ಲಿ ಯಾರಾದರೂ ಒಬ್ಬರು ಸಂಘದ ಸದಸ್ಯರಾಗಿರಬೇಕು ಮತ್ತು ಅರ್ಜಿ ಸಲ್ಲಿಸುವವರು 18 ವರ್ಷ ವಯಸ್ಸು ಪೂರೈಸಿರಬೇಕು.

ಯೋಜನೆಯ ಮಾರ್ಗಸೂಚಿಯ ಅನ್ವಯ ಆಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಸೂಕ್ತ ದಾಖಲಾತಿಗಳೊಂದಿಗೆ ಜ.21 ರೊಳಗಾಗಿ ಮಹಾನಗರ ಪಾಲಿಕೆ ವಲಯ ಕಛೇರಿ-1(ಹಳೇ ಕಟ್ಟಡದ) ಡೇ-ನಲ್ಮ್ ಶಾಖೆಗೆ ಅರ್ಜಿ ಸಲ್ಲಿಸಲು ಸೂಚಿಸಿದ್ದು, ಅಗತ್ಯ ದಾಖಲಾತಿಗಳನ್ನು ಸಲ್ಲಿಸದಿದ್ದಲ್ಲಿ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಡೇ-ನಲ್ಮ್ ಶಾಖೆಯನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿರುತ್ತಾರೆ.