ವಿಜಯನಗರ…ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ‘ಗ್ರಾಮ ಒನ್’ ಸೇವಾ ಕೇಂದ್ರವು ಸೇವಾಸಿಂಧು ಯೋಜನೆ ಅಡಿಯಲ್ಲಿ ರೂಪಿಸಲಾಗಿದೆ. ಸರ್ಕಾರದ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಈ ಯೋಜನೆಯನ್ನು ಈಗಾಗಲೇ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಸ್ಥಾಪಿಸಿ ಯಶಸ್ವಿಯಾಗಿದ್ದು, ಸರ್ಕಾರವು ಈಗ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ “ಗ್ರಾಮ ಒನ್” ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ವಿಜಯನಗರ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಜನಸಂಖ್ಯೆ ಅನುಗುಣವಾಗಿ “ಗ್ರಾಮ ಒನ್” ಕೇಂದ್ರಗಳನ್ನು ಸ್ಥಾಪಿಸಲು ಆಸಕ್ತ ಅರ್ಹ ಆಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಅನಿರುದ್ಧ್ ಪಿ.ಶ್ರವಣ್ ಅವರು ತಿಳಿಸಿದ್ದಾರೆ.
ಈ ಯೋಜನೆ ಅಡಿಯಲ್ಲಿ 750 ಕ್ಕೂ ಹೆಚ್ಚು ನಾಗರೀಕ ಸೇವೆಗಳನ್ನು ಪಡೆಯಲು ಅರ್ಜಿಗಳನ್ನು ಸ್ವೀಕರಿಸಲಾಗುವುದು ಮತ್ತು ಸಕಾಲ, ಮಾಹಿತಿ ಹಕ್ಕು ಅಧಿನಿಯಮ, ಬ್ಯಾಂಕಿಂಗ್ ಸೇವೆಗಳು ಹಾಗೂ ಸಾರ್ವಜನಿಕರ ಕುಂದುಕೊರತೆ ನಿವಾರಣೆ ಕೋರಿ ಅರ್ಜಿಗಳನ್ನು ಸ್ವೀಕರಿಸಲಾಗುವುದು.
ವಾರದ ಎಲ್ಲಾ ಏಳು ದಿನಗಳಲ್ಲಿ ಗ್ರಾಮ ಒನ್ ಕೇಂದ್ರಗಳು ಬೆಳಿಗ್ಗೆ 8ರಿಂದ ರಾತ್ರಿ 8ರವರೆಗೆ ಕಾರ್ಯನಿರ್ವಹಿಸಲಿವೆ.
ಆಸಕ್ತಿಯುಳ್ಳ ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳು
https//Karnatakaone.gov.in ಅಥವಾ
www.sevasindhu.Karnataka.gov.in ಜಾಲತಾಣದಲ್ಲಿ ಆನ್‍ಲೈನ್ ಮೂಲಕ ಮೇ 04ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಮೊ.7829274377/9743669741/ 9686579224 ಅಥವಾ ಇಮೇಲ್
[email protected] ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ವರದಿ…ಸುಬಾನಿ ಪಿಂಜಾರ ಹಂಪಿ ಮಿರರ್ ವಿಜಯನಗರ.