ಹೊಸಪೇಟೆ…. ಕಮಲಾಪುರ ಪಟ್ಟಣ ಪಂಚಾಯಿತಿ ಕಾರ್ಯಾಲಯದ ವತಿಯಿಂದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ದೀನ್ ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಲ್ಲಿ ಕಮಲಾಪುರ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಕಾರ್ಯ ನಿರ್ವಹಿಸಲು ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಕಮಲಾಪುರ ಪಟ್ಟಣ ಪಂಚಾಯಿತಿಯ ವ್ಯಾಪ್ತಿಯ ಅರ್ಹ ಸ್ವ-ಸಹಾಯ ಸಂಘ(ಗುಂಪು)ಗಳ ಸದಸ್ಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಮಿತಿಯು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಆಯ್ಕೆ ಸಮಿತಿಯ ನಿರ್ಣಯವೇ ಅಂತಿಮವಾಗಿದ್ದು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು ಎಂದು ಕಮಲಾಪುರ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಯವರು ತಿಳಿಸಿದ್ದಾರೆ.
ವಿವರಗಳು ಹುದ್ದೆಯ ಹೆಸರು : ಸಮುದಾಯ ಸಂಪನ್ಮೂಲ ವ್ಯಕ್ತಿ., ಹುದ್ದೆ ಸಂಖ್ಯೆ : 01 ಹುದ್ದೆಗಳು, ಮಾಸಿಕ ಗೌರವಧನ : ರೂ.8 ಸಾವಿರ ಮತ್ತು ಪ್ರಯಾಣ ಭತ್ಯೆ ರೂ.2ಸಾವಿರ (ಅಗತ್ಯತೆಗೆ ತಕ್ಕಂತೆ ಗರಿಷ್ಠ), ಜ.27ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹತೆಗಳು ವಯಸ್ಸು 18 ರಿಂದ 45 ವರ್ಷದೊಳಗಿರತಕ್ಕದ್ದು, ಕನಿಷ್ಠ ದ್ವಿತೀಯ ಪಿ.ಯು.ಸಿ.ಉತ್ತೀರ್ಣರಾಗಿರಬೇಕು ಹಾಗೂ ಹೆಚ್ಚಿನ ವಿದ್ಯಾರ್ಹತೆಗೆ ಆದ್ಯತೆ ನೀಡಲಾಗುವುದು, ಕಂಪ್ಯೂಟರ್ ಜ್ಞಾನ ಹೊಂದಿರಬೇಕು (ಪ್ರಮಾಣ ಪತ್ರ ಹೊಂದಿರತಕ್ಕದ್ದು), ಕಮಲಾಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಯಂ ವಾಸವಿದ್ದು, ಕನಿಷ್ಠ 3 ವರ್ಷಗಳಿಂದ ಸ್ವ-ಸಹಾಯ ಸಂಘದ (ಗುಂಪಿನಲ್ಲಿ) ಸದಸ್ಯರಾಗಿರತಕ್ಕದ್ದು, ಆಂತರಿಕ ಸಾಲ ಪಡೆದು ಮರು ಪಾವತಿಸಿರಬೇಕು / ಚಾಲ್ತಿಯಲ್ಲಿರಬೇಕು ಸಾಲ ಮರು ಪಾವತಿಸದೇ ಸುಸ್ತಿದಾರರಾಗಿರಬಾರದು, ಯಾವುದೇ ಸರ್ಕಾರಿ/ಸರ್ಕಾರೇತರ ಸಂಸ್ಥೆಗಳಲ್ಲಿ ಪೂರ್ಣಾವಧಿ ಅಥವಾ ತಾತ್ಕಾಲಿಕ ಉದ್ಯೋಗಸ್ಥರಾಗಿರಬಾರದು, ಉತ್ತಮ ಸಂವಹನ ಕೌಶಲ್ಯ ಜೊತೆಗೆ ಸಮುದಾಯ ಚಟುವಟಿಕೆ ತರಬೇತಿಗಳಲ್ಲಿ ಭಾಗವಹಿಸುವಂತಿರಬೇಕು,
ಸ್ವ-ಸಹಾಯ ಸಂಘ ನಿರ್ವಹಿಸಬೇಕಿರುವ ಪುಸ್ತಕಗಳು ಹಾಗೂ ವಹಿಗಳ ಬಗ್ಗೆ ಜ್ಞಾನವನ್ನು ಹೊಂದಿರಬೇಕು, ಪಾಲ್ಗೊಳ್ಳುವ ಇಚ್ಚಾಶಕ್ತಿ ಹೊಂದಿರತಕ್ಕದ್ದು, ಕಾರ್ಯನಿಮಿತ್ತ ಅಗತ್ಯವಿದ್ದಲ್ಲಿ ಬೇರೆ ಬೇರೆ ಸ್ಥಳಗಳಲ್ಲಿ/ಜಿಲ್ಲೆಗಳಲ್ಲಿ/ಹೊರ ರಾಜ್ಯಗಳಲ್ಲಿ ನೀಡುವ ತರಬೇತಿ ಅಥವಾ ಕಾರ್ಯದ ಇತರೆ ಚಟುವಟಿಕೆಗಳಲ್ಲಿ ಭಾಗವಹಿಸಲು ಸಿದ್ದರಿರಬೇಕು ಎಂದು ಅವರು ತಿಳಿಸಿದ್ದಾರೆ.
–-*