ಹೊಸಪೇಟೆ (ವಿಜಯನಗರ) ಬೀದಿ ನಾಯಿ ದಾಳಿ ಮಾಡಿದ ಪರಿಣಾಮ ಒಂಬತ್ತು ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡ ಘಟನೆ ಹೊಸಪೇಟೆ ನಗರದ ಚಿತ್ವಾಡಗಿ ಪ್ರದೇಶದಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಬೀದಿ ನಾಯಿಯಿಂದ ದಾಳಿಗೆ ಒಳಗಾದ ಬಾಲಕಿ ವೇದಶ್ರೀ ಮುಖಕ್ಕೆ ಗಂಭೀರ ಗಾಯವಾಗಿದ್ದು ಗಾಯಾಳು ಬಾಲಕಿಯನ್ನು ಹೊಸಪೇಟೆ ನಗರದ ನೂರು ಹಾಸಿಗೆ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಯಿತು.
ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಬಾಲಕಿಯನ್ನು ದಾಖಲಿಸುವ ಮೂಲಕ ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗಿದೆ. ಇನ್ನು ಘಟನೆಯಿಂದ ಬಾಲಕಿಯ ತಂದೆ ಕೊಟ್ರೇಶ್ ಹೊಸಪೇಟೆ ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೀದಿ ನಾಯಿಗಳ ಹಾವಳಿಯ ನಿಯಂತ್ರಣಕ್ಕೆ ಆಗ್ರಹಿಸಿದ್ದಾರೆ. ಅದಲ್ಲದೆ ಚಿತವಾಡಗಿಯ ಸ್ಥಳೀಯರು ಕೂಡ ಚಿತ್ತವಾಡಿಗೆ ರಥ ಬೀದಿಯಲ್ಲಿ ಸೇರಿ ನಗರಸಭೆ ಅಧಿಕಾರಿಗಳು ಮತ್ತು ಸ್ಥಳೀಯ ಕಾರ್ಪೊರೇಟರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಒತ್ತಾಯಿಸಿದ್ದಾರೆ.
ಕಾರಣ ಇತ್ತೀಚಿಗೆ ಹೊಸಪೇಟೆ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು ಮತ್ತು ಚಿಕ್ಕ ಮಕ್ಕಳು ನಗರದ ನಿರ್ಜನ ಪ್ರದೇಶದಲ್ಲಿ ಸಂಚರಿಸುವುದು ಕಷ್ಟವಾಗಿದೆ, ಹಾಗಾಗಿ ಕೂಡಲೇ ಹೊಸಪೇಟೆ ನಗರಸಭೆ ಅಧಿಕಾರಿಗಳು ಬೀದಿ ನಾಯಿಗಳ ನಿಯಂತ್ರಣಕ್ಕೆ ಮುಂದಾಗ ಬೇಕಾಗಿದೆ.
ವರದಿ.. ಸುಭಾನಿ ಪಿಂಜಾರ ಹಂಪಿ ಮಿರರ್ ವಿಜಯನಗರ.