ಬಳ್ಳಾರಿ,ಜ.17(ಕರ್ನಾಟಕ ವಾರ್ತೆ): ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2021ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತ ಅಧಿಕಾರಿಗಳಾದ ಕೆ.ಬಿ.ಕಿರಣ್‍ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್. ಎಸ್. ಎಲ್. ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧೀಕೃತವಾದ ದೃಢೀಕರಿಸಲ್ಪಟ್ಟ ಜನ್ಮ ದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.
ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ. ಮಾಡಿಸಿದಾಗ 1/8 ಡಮ್ಮಿ ಆಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಆನುವಾದ ಪಠ್ಯಪುಸ್ತಕ ಹಾಗು ಬೇರಾವುದೇ ಪದವಿ/ಸ್ನಾತಕೋತ್ತರ/ಪಿ.ಎಚ್.ಡಿ ಪದವಿಗೆ ಸಿದ್ಧಪಡಿಸಿದ ಸಂಶೋಧನಾ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂದ ಮುಂತಾದ ಕನ್ನಡ ಸಾಹಿತ್ಯ ಪ್ರಕಾರಗಳಿಗೆ ಸಂಬಂದಿಸಿದಂತೆ ಹಸ್ತಪ್ರತಿ ಇರಬೇಕು. ಕೃತಿಯ ಪಠ್ಯದಲ್ಲಿ ಯಾವುದೆ ಧರ್ಮ, ದೇವರು, ಜಾತಿ, ಕೋಮು ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ದತಿ ಇತ್ಯಾದಿ. ಸಂಗತಿಗಳಿಗೆ ಸಂಬಂದಿಸಿದಂತೆ ಹಾಗು ರಾಷ್ಟಿಯ ನಾಯಕರುಗಳ ಕುರಿತಂತೆ (ನೇರವಾಗಿ ಆಥವಾ ಪರೋಕ್ಷವಾಗಿ) ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ರಾಷ್ರ್ಟೀಯ ಭಾವೈಕ್ಯತೆಗೆ ದಕ್ಕೆ ತರುವಂತಹ ವಿಷಯ/ಸಂಗತಿಗಳು ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ತಮ್ಮ ಮೂಲ ಹಸ್ತಪ್ರತಿಯ ಒಂದು ಪ್ರತಿಯನ್ನು ತಮ್ಮ ಬಳಿಯೇ ಇಟ್ಟುಕೊಳ್ಳಬೇಕು.
ಆಯ್ಕೆಯಾದ ಹಸ್ತಪ್ರತಿಗಳ ಪ್ರಕಟಣೆಗೆ 15 ಸಾವಿರ ರೂ. ಗಳ ಪ್ರೋತ್ಸಾಹಧನ ನೀಡಲಾಗುವುದು.
ಅರ್ಜಿಗಳನ್ನು ಫೆ.15 ರೊಳಗೆ ಆಡಳಿತಾಧಿಕಾರಿಗಳು ಕನ್ನಡ ಪುಸ್ತಕ ಪ್ರಧಿಕಾರ ಕನ್ನಡ ಭವನ ಜೆ.ಸಿ. ರಸ್ತೆ ಬೆಂಗಳೂರು 560-002 ಅವರಿಗೆ ಕಳುಹಿಸಿಕೊಡಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಆಡಳಿತಾದಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೆ ಮಹಡಿ, ಜೆ.ಸಿ. ರಸ್ತೆ ಬೆಂಗಳೂರು 560-002 ವೆಬ್ ಸೈಟ್ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom ಗೆ ಮತ್ತು ದೂ.080-22484561/22107704 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
––-*-