You are currently viewing ಹಂಪಿ ಉತ್ಸವ ವೀಕ್ಷಣೆಗೆ 120 ಬಸ್‌ಗಳ ಸಂಚಾರ. ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ.

ಹಂಪಿ ಉತ್ಸವ ವೀಕ್ಷಣೆಗೆ 120 ಬಸ್‌ಗಳ ಸಂಚಾರ. ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ.

  • Post category:Uncategorized

ವಿಜಯನಗರ( ಹೊಸಪೇಟೆ) ಸಾರ್ವಜನಿಕರಿಗೆ ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
ಹಂಪಿ ಉತ್ಸವ ವೀಕ್ಷಣೆಗೆ 120 ಬಸ್‌ಗಳ ವ್ಯವಸ್ಥೆ
ಹೊಸಪೇಟೆ,(ವಿಜಯನಗರ)ಕರ್ನಾಟಕ ವಾರ್ತೆ:
ಹಂಪಿ ಉತ್ಸವದ ವೀಕ್ಷಣೆಗಾಗಿ ಕಡ್ಡಿರಾಂಪುರದ ಕ್ರಾಸ್ ಬಳಿಯಿಂದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತವಾಗಿ ಸಾರ್ವಜನಿಕರನ್ನು ಕರೆದುಕೊಂಡು ಹೋಗಲು ಸುಮಾರು 120 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಎಲ್ಲರೂ ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ಗಳ ಸೌಲಭ್ಯ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಇಲ್ಲಿನ ಕಡ್ಡಿರಾಂಪುರ ಕ್ರಾಸ್ ಬಳಿ ಶುಕ್ರವಾರ ಹಂಪಿ ಉತ್ಸವದ ಅಂಗವಾಗಿ ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ಸಾರ್ವಜನಿಕರ ಉಚಿತ ಪ್ರಯಾಣಕ್ಕೆ ಚಾಲನೆ ನೀಡಿದರು.


ವಿಜಯನಗರದ ಗತವೈಭವ ಸಾರುವ ಹಂಪಿ ಉತ್ಸವ ಇದೇ ಜನವರಿ 27 ರಿಂದ 29ರವರೆಗೆ ಮೂರು ದಿನಗಳ ಕಾಲ ವಿಜೃಂಭಣೆಯಿAದ ನಡೆಯಲಿದೆ. ಹಾಗಾಗಿ ಉತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವುದರಿಂದ ಕಮಲಾಪುರ ಮಾರ್ಗವಾಗಿ ಏಕಮುಖ ರಸ್ತೆ ಮಾಡಲಾಗಿದ್ದು, ವಾಹನ ದಟ್ಟಣೆ ನಿಯಂತ್ರಿಸಲು ಕಡ್ಡಿರಾಂಪುರದ ಕ್ರಾಸ್ ಬಳಿ ಎಲ್ಲ ಬಗೆಯ ವಾಹನಗಳಿಗೂ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದರು.


ಹಂಪಿ ಉತ್ಸವು ಗಾಯತ್ರಿ ಪೀಠದ ಮುಖ್ಯ ವೇದಿಕೆ ಸೇರಿದಂತೆ ಎದುರು ಬಸವಣ್ಣ ವೇದಿಕೆ, ವಿರೂಪಾಕ್ಷೇಶ್ವರ ವೇದಿಕೆ, ಸಾಸಿವೆಕಾಳು ಗಣಪ ವೇದಿಕೆ ಸೇರಿದಂತೆ ಒಟ್ಟು ನಾಲ್ಕು ವೇದಿಕೆಗಳಲ್ಲಿ ಏಕಕಾಲಕ್ಕೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಗಳು ನಡೆಯಲಿದ್ದು, ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದAತೆ ಹಂಪಿ ಉತ್ಸವ ವೀಕ್ಷಣೆಗೆ ಆಸನದ ವ್ಯವಸ್ಥೆ, ಕುಡಿಯುವ ನೀರು ವ್ಯವಸ್ಥೆ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಸೇರಿದಂತೆ ಮತ್ತಿತರರು ಇದ್ದರು.
ಫೋಟೋ ವಿವರ: ಹೊಸಪೇಟೆಯ ಕಡ್ಡಿರಾಂಪುರ ಕ್ರಾಸ್ ಬಳಿ ಶುಕ್ರವಾರ ಹಂಪಿ ಉತ್ಸವದ ಅಂಗವಾಗಿ ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ಸಾರ್ವಜನಿಕರ ಉಚಿತ ಪ್ರಯಾಣಕ್ಕೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಚಾಲನೆ ನೀಡಿದರು.