You are currently viewing ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಅವರಿಂದ ಕೋವಿಡ್ ಪರಿಹಾರ ವಿತರಣೆ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಅವರಿಂದ ಕೋವಿಡ್ ಪರಿಹಾರ ವಿತರಣೆ


ಬಳ್ಳಾರಿ.. ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಬಳ್ಳಾರಿ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕೋವಿಡ್‍ನಿಂದ ಮೃತಪಟ್ಟ 15 ಜನ ಫಲಾನುಭವಿಗಳ ಕುಟುಂಬಸ್ಥರಿಗೆ ರಾಜ್ಯ ಸರಕಾರದಿಂದ 1ಲಕ್ಷ ರೂ.ಗಳ ಚೆಕ್ ಗಳನ್ನು ಗುರುವಾರ ವಿತರಿಸಿದರು.

ಕೋವಿಡ್‍ನಿಂದ ಮೃತಪಟ್ಟವರ ಕುಟುಂಬಸ್ಥರ ಅಹವಾಲುಗಳನ್ನು ಆಲಿಸಿದ ಸಚಿವ ಶ್ರೀರಾಮುಲು ಅವರು ಅವರಿಗೆ ಸಾಂತ್ವಾನ ಹೇಳಿದರು.
ಕೋವಿಡ್ ಇನ್ನೂ ನಮ್ಮಿಂದ ದೂರವಾಗಿಲ್ಲ. ನಾವೆಲ್ಲರೂ ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸೋಣ ಎಂದರು.

ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರರೆಡ್ಡಿ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇದ್ದರು.