You are currently viewing ವಸತಿ ಶಾಲೆಯ ವಿಧ್ಯಾರ್ಥಿಗಳನ್ನ ಟಾರ್ಗೆಟ್ ಮಾಡಿರುವ ಮಹಾಮಾರಿ.

ವಸತಿ ಶಾಲೆಯ ವಿಧ್ಯಾರ್ಥಿಗಳನ್ನ ಟಾರ್ಗೆಟ್ ಮಾಡಿರುವ ಮಹಾಮಾರಿ.

ವಿಜಯನಗರ..ಶಾಲಾ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿರುವ ಮಹಾಮಾರಿ ಕೊರೊನ ಬೆಂಬಿಡದೆ ಕಾಡುತ್ತಿದೆ. ನಿನ್ನೆ ಒಂದೇ ವಸತಿ ಶಾಲೆಯಲ್ಲಿ 24 ವಿದ್ಯಾರ್ಥಿಗಳಲ್ಲಿ ಕರೊನಾ ಕಾಣಿಸಿಕೊಂಡಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ತಿಮ್ಮಲಾಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಿನ್ನೆ 74 ವಿಧ್ಯಾರ್ಥಿಗಳನ್ನ ಪರೀಕ್ಷೆಗೆ ಒಳಪಡಿಸಲಾಗಿತ್ತು, ಅದರಲ್ಲಿ 24 ವಿದ್ಯಾರ್ಥಿಗಳಲ್ಲಿ ಕರೊನಾ ಪಾಸಿಟಿವ್ ಧೃಡಪಟ್ಟಿದೆ.

ಸದ್ಯಕ್ಕೆ ಎಲ್ಲಾ ವಿದ್ಯಾರ್ಥಿಗಳನ್ನು ಶಾಲೆಯಲ್ಲಿ ಕ್ವಾರೆಂಟೆನ್ ಮಾಡಲಾಗಿದ್ದು, ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಮಕ್ಕಳ ಮೇಲೆ ನಿಗಾವಹಿಸಿದೆ. ಅದೇರೀತಿ ಬೇರೆ ಮಕ್ಕಳಿಗೆ ಸೋಂಕು ತಗುಲದಂತೆ ಮಕ್ಕಳನ್ನ ಪ್ರತ್ಯೇಕಗೊಳಿಸಲಾಗಿದೆ.