You are currently viewing ಶಿಕ್ಷಕಿ ಸೇರಿ 13 ವಿದ್ಯಾರ್ಥಿಗಳಿಗೆ ಕೊರೊನಾ

ಶಿಕ್ಷಕಿ ಸೇರಿ 13 ವಿದ್ಯಾರ್ಥಿಗಳಿಗೆ ಕೊರೊನಾ

ವಿಜಯನಗರ ಹೊಸಪೇಟೆ: ತಾಲೂಕಿನ ಕಮಲಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ( ಶಾಲಾ ವಿಭಾಗ) ದ ವಿದ್ಯಾರ್ಥಿಗಳಿಗೆ ಕೊರೊನಾ ಧೃಡವಾಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರವಾರದಂದು ಒಂದೇ ಶಾಲೆಯ ಒಬ್ಬ ಶಿಕ್ಷಕಿ ಸೇರಿ 13 ವಿದ್ಯಾರ್ಥಿಗಳಿಗೆ ಪಾಸಿಟಿವ್ ಧೃಡಪಟ್ಟಿದ್ದು ಶಾಲೆಯನ್ನು ಸಿಲ್ಡೌನ್ ಮಾಡಲಾಗಿದೆ.

ಇಬ್ಬರು ಹಾಸ್ಟೆಲ್ ವಿದ್ಯಾರ್ಥಿಗಳು, ಇನ್ನೂ ಉಳಿದ ಕಮಲಾಪುರ ಸುತ್ತಮುತ್ತಲಿನ ವಿದ್ಯಾರ್ಥಿಗಳು ಸೇರಿ. 47 ಜನರಿಗೆ ನಿನ್ನೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿದಾಗ ಅದರಲ್ಲಿ 13 ವಿದ್ಯಾರ್ಥಿಗಳು, ಒಬ್ಬ ಶಿಕ್ಷರಿಗೆ ಕೊರೊನಾ ಧೃಡವಾಗಿದೆ.

ಒಟ್ಟು 16 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಾಗೇಶ್ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು

ವರದಿ ಸುಬಾನಿ ಪಿಂಜಾರ ವಿಜಯನಗರ.