ಬಳ್ಳಾರಿ ನಗರಕ್ಕೆ ಕುಡಿಯುವ ನೀರು:800 ಎಂ.ಎಲ್ ಸಾಮರ್ಥ್ಯದ ಕೆರೆಗೆ ನೀರು ತುಂಬಿಸುವುದಕ್ಕೆ ಸಚಿವ ಬಿ.ಶ್ರೀರಾಮುಲು ಚಾಲನೆ


ಬಳ್ಳಾರಿ.ಬಳ್ಳಾರಿ ‌ನಗರದಲ್ಲಿ‌ ಕುಡಿಯುವ ನೀರಿನ ಕೊರತೆ ಆಗದಂತೆ ಸಂರಕ್ಷಿಸಲು 65ಲಕ್ಷ ಲೀಟರ್ ಸಾಮರ್ಥ್ಯದ ಮದರ್ ಟ್ಯಾಂಕ್ ಕಂಫಾರ್ಟ್ ಮೆಂಟ್ ಹಾಗೂ
ಬಳ್ಳಾರಿ ನಗರಕ್ಕೆ ಕುಡಿಯುವ ನೀರಿನ ಸಲುವಾಗಿ 800ಎಂ.ಎಲ್ ಸಾಮರ್ಥ್ಯದ ಕೆರೆಗೆ ನೀರು ತುಂಬುವ ಕಾರ್ಯಕ್ರಮಕ್ಕೆ ಬಳ್ಳಾರಿ ತಾಲೂಕಿನ ಶಿವಪುರ ಬಳಿ ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಬುಧವಾರ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಸಂಸದರಾದ ವೈ.ದೇವೇಂದ್ರಪ್ಪ,ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಸೋಮಶೇಖರ್ ರೆಡ್ಡಿ,ಬಿ.ನಾಗೇಂದ್ರ,ಡಿಸಿ ಪವನಕುಮಾರ್ ಮಾಲಪಾಟಿ, ಎಸ್ಪಿ ಸೈದುಲು ಅಡಾವತ್, ಮಹಾನಗರ ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳು ಇದ್ದರು.