You are currently viewing ಹಗರಿಬೊಮ್ಮನಹಳ್ಳಿಯ ಗ್ರಾಮ ಪಂಚಾಯತಿ ಗ್ರಂಥಾಲಯದ ಮೇಲ್ವಿಚಾರಕರ ಹುದ್ದೆ: ಅರ್ಜಿ ಆಹ್ವಾನ

ಹಗರಿಬೊಮ್ಮನಹಳ್ಳಿಯ ಗ್ರಾಮ ಪಂಚಾಯತಿ ಗ್ರಂಥಾಲಯದ ಮೇಲ್ವಿಚಾರಕರ ಹುದ್ದೆ: ಅರ್ಜಿ ಆಹ್ವಾನ


ಹೊಸಪೇಟೆ(ವಿಜಯನಗರ),ಮೇ 20: ಹಗರಿಬೊಮ್ಮನಹಳ್ಳಿ ತಾಲೂಕಿನ ಬ್ಯಾಸಿಗಿದೇರಿ ಗ್ರಾಮ ಪಂಚಾಯತಿ ಗ್ರಂಥಾಲಯದ ಮೇಲ್ವಿಚಾರಕರ ಹುದ್ದೆಗೆ ಗೌರವ ಸಂಭಾವನೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ/ವಿಜಯನಗರ ಜಿಲ್ಲೆಯ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಮೇಲ್ವಿಚಾರಕರ ಸ್ಥಾನವು “ಪರಿಶಿಷ್ಟ ಜಾತಿ” ಅಭ್ಯರ್ಥಿಗೆ ಮೀಸಲಾಗಿರುತ್ತದೆ.
ಅರ್ಜಿಗಳನ್ನು ದಾಖಲೆಗಳೊಂದಿಗೆ ಸಲ್ಲಿಸಲು ಜೂ.10ರೊಳಗಾಗಿ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳಿಗೆ ಸಲ್ಲಿಸಬೇಕು.
ಅರ್ಹತೆಗಳು: ಅಭ್ಯರ್ಥಿಯು ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿರಬೇಕು. (ನಿವಾಸಿ ದೃಡೀಕರಣ ಪತ್ರ ಲಗತ್ತಿಸಬೇಕು). ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ಸಲ್ಲಿಸಬೇಕು.
ನಿಗದಿಪಡಿಸಿದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.
ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲಾತಿ (ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಟಿ.ಸಿ, ಜಾತಿ ಪ್ರಮಾಣ ಪತ್ರ, ಸ್ಥಳೀಯ ನಿವಾಸಿ ದೃಡೀಕರಣ ಪತ್ರ, ಅಂಗವಿಕಲತೆ ಇದ್ದಲ್ಲಿ ದೃಡೀಕರಣ ಪತ್ರ) ಇತ್ಯಾದಿಗಳೊಂದಿಗೆ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳಿಗೆ ಅಥವಾ ಪಂಚಾಯತಿ ಕಾರ್ಯದರ್ಶಿಗಳಿಗೆ ನಿಗದಿಪಡಿಸಿದ ಅವಧಿಯೊಳಗೆ ಸಲ್ಲಿಸಬೇಕು.
ವಯಸ್ಕರ ಶಿಕ್ಷಣದಡಿ ನಡೆಯುತ್ತಿರುವ ಮುಂದುವರಿಕೆ ಕಲಿಕಾ ಕೇಂದ್ರಗಳ ಪ್ರೇರಕ/ಉಪಪ್ರೇರಕರು ಸಹ ಅರ್ಜಿ ಸಲ್ಲಿಸಬಹುದು. (ದೃಡೀಕರಣ ಪತ್ರ ಲಗತ್ತಿಸಬೇಕು) ಮೇಲ್ವಿಚಾರಕರಾಗಿ ನೇಮಕಗೊಂಡ ನಂತರ ಪ್ರೇರಕ/ಉಪಪ್ರೇರಕ ಹುದ್ದೆಗೆ ರಾಜೀನಾಮೆ ನೀಡತಕ್ಕದ್ದು, ಹಾಗೂ ಬಿಡುಗಡೆ ಪತ್ರವನ್ನು ಸಂಬಂಧಿಸಿದ ಇಲಾಖೆಯಿಂದ ಪಡೆದು ಈ ಕಚೇರಿಗೆ ಸಲ್ಲಿಸತಕ್ಕದ್ದು. ಪ್ರೇರಕ/ಉಪಪ್ರೇರಕರಿಗೆ ಮೀಸಲಾತಿ ಅನ್ವಯಿಸುತ್ತದೆ.
ವಯೋಮಿತಿ ಅರ್ಜಿಗಳನ್ನು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷವನ್ನು ಪೂರೈಸಿರಬೇಕು. ಗರಿಷ್ಠ ವಯೋಮಿತಿ ಸಾಮಾನ್ಯ ಅಭ್ಯರ್ಥಿ 33 ವರ್ಷ. 2ಎ, 2ಬಿ,3ಎ,3ಬಿ ಗೆ 36 ವರ್ಷ. ಪ.ಜಾತಿ/ಪ.ಪಂಗಡ/ಪ್ರ.ವರ್ಗ 1 ಗಳಿಗೆ 38 ವರ್ಷ ಹೊಂದಿರಬೇಕು. ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೇಂದ್ರ ಗ್ರಂಥಾಲಯ, ಬಳ್ಳಾರಿ ಕಚೇರಿ ಹಾಗೂ ದೂ:08392-276887 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.