You are currently viewing ವಿಜಯನಗರ ಜಿಲ್ಲೆಯಲ್ಲಿ ದಾಖಲೆ ಇಲ್ಲದೇ ಹಣ ಸಾಗಾಟ, 6ಲಕ್ಷ ರೂ. ವಶ

ವಿಜಯನಗರ ಜಿಲ್ಲೆಯಲ್ಲಿ ದಾಖಲೆ ಇಲ್ಲದೇ ಹಣ ಸಾಗಾಟ, 6ಲಕ್ಷ ರೂ. ವಶ

  • Post category:Uncategorized

ವಿಜಯನಗರ ಜಿಲ್ಲೆ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ನೀತಿಸಂಹಿತೆ ಜಾರಿಯಲ್ಲಿದ್ದು, ಚೆಕ್‌ಪೋಸ್ಟ್‌ಗಳಲ್ಲಿ ತೀವ್ರ ನಿಗಾವಹಿಸಲಾಗುತ್ತಿದೆ. ಜಿಲ್ಲೆಯ ವಿವಿಧೆಡೆ ಅಕ್ರಮವಾಗಿ ಹಣ ಸಾಗಾಟ ತಡೆಯಲು ಚೆಕ್‌ಪೋಸ್ಟ್‌ಗಳಲ್ಲಿ ವಾಹನ ತಪಾಸಣೆ ಕೈಗೊಳ್ಳಲಾಗುತ್ತಿದೆ.


ಭಾನುವಾರ ಸೂಕ್ತ ದಾಖಲೆ ಇಲ್ಲದೆ ವಾಹನಗಳಲ್ಲಿ ಹಣ ಸಾಗಿಸುತ್ತಿದ್ದ ವೇಳೆ ಚೆಕ್‌ಪೋಸ್ಟ್ ಬಳಿ ತಪಾಸಣೆ ನಡೆಸಿ ಹಣ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.
ಜಿಲ್ಲೆಯ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದೆ.


ಹೊಸಪೇಟೆ ತಾಲ್ಲೂಕಿನ ಭುವನಹಳ್ಳಿ ಚೆಕ್ ಪೋಸ್ಟ್‌ನಲ್ಲಿ
ಬಳ್ಳಾರಿಯಿಂದ ಹುಬ್ಬಳ್ಳಿ ಕಡೆಗೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 4 ಲಕ್ಷ ರೂ. ಹಣ ಹಾಗೂ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಚೆಕ್‌ಪೋಸ್ಟ್‌ನಲ್ಲಿ ಹಿರೇಕೆರೂರಿನಿಂದ ಮಾಗಳಕ್ಕೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡು ಗ್ರಾಮೀಣ ಪೊಲೀಸ್ ಠಾಣೆ ಮತ್ತು ಹಿರೇಹಡಗಲಿ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.