ವಿಜಯನಗರ (ಹೊಸಪೇಟೆ )ಮಾನಹಾನಿ ಮತ್ತು ಜಾತಿ ನಿಂದನೆ ಆರೋಪದ ಅಡಿಯಲ್ಲಿ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರನ್ನು ಹೊಸಪೇಟೆ ಪಟ್ಟಣ ಪೊಲೀಸ್ರು ಬಂಧಿಸಿದ್ದಾರೆ. ಹೊಸಪೇಟೆ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಯೋಗಲಕ್ಷ್ಮಿ ಮತ್ತು ಸಂದೀಪ್ ಬಂದಿತ ಆರೋಪಿಗಳಾಗಿದ್ದಾರೆ. ಕಳೆದ 3 ನೇ ತಾರೀಕಿನಂದು ಹೊಸಪೇಟೆ ನಗರದ ಮಲ್ಲಿಗೆ ಹೋಟೆಲ್ ನಲ್ಲಿ, ವಿಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಭೆಯನ್ನು ನಡೆಸಲಾಗಿತ್ತು, ಆಯೋಜನೆ ಮಾಡಿದ್ದ ಈ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಗಲಾಟೆ ನಡೆದಿತ್ತು.
ಕಲ್ಯಾಣ ಕರ್ನಾಟಕ ಸಂಘಟನೆಯ ಕಾರ್ಯದರ್ಶಿ ಶಿಲ್ಪಾ, ಮತ್ತು ಯೋಗಲಕ್ಷ್ಮಿ ಹಾಗೂ ಸಂದೀಪ್ ನಡುವೆ ಮಾತಿಗೆ ಮಾತು ಬೆಳೆದು ಜಗಳ ಕೂಡ ನಡೆದಿತ್ತು. ಈ ಸಂದರ್ಭದಲ್ಲಿ ಶಿಲ್ಪಾ ಅವರು ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಯೋಗಲಕ್ಷ್ಮಿ ಮತ್ತು ಸಂಧಿ ವಿರುದ್ದ ದೂರು ಸಲ್ಲಿಸಿ, ಜಾತಿನಿಂದನೆ ಮತ್ತು ಮಾನಹಾನಿ ಪ್ರಕರಣ ದಾಖಲು ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಪೇಟೆ ಪಟ್ಟಣ ಪೊಲೀಸರು ಈ ಇಬ್ಬರನ್ನ ಬಂಧಿಸಿ ನ್ಯಾಯಾಂಗ ಬಂದನಕ್ಕೆ ಒಪ್ಪಿಸಿದ್ದಾರೆ.